ಹಿಂದುಳಿದ ವರ್ಗದ ನಾಯಕ ಶ್ರೀ ಸಿದ್ಧರಾಮಯ್ಯ ನವರನ್ನು ದುರ್ಬಲಗೊಳಿಸುವ ಕುತಂತ್ರವನ್ನು ರಾಜ್ಯಪಾಲರ ಅಧಿಕಾರವನ್ನು ದುರುಪಯೋಗ ಪಡಿಸಿಕೊಳ್ಳುವ ಮೂಲಕ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನವನ್ನು ಬಿಜೆಪಿ ಹಾಗೂ ಜೆಡಿಎಸ್ ನಾಯಕರು ನಿಲ್ಲಿಸಬೇಕು.
ಅವರ ಹೆಸರಿಗೆ ಇಲ್ಲ ಸಲ್ಲದ ಕಳಂಕವನ್ನು ತರುವ ಯತ್ನವನ್ನು ಮುಂದುವರೆಸಿದರೆ ಜಿಲ್ಲಾ ಶೋಷಿತ ಸಮುದಾಯಗಳ ಒಕ್ಕೂಟದಿಂದ ಪ್ರತಿಭಟಿಸುವ ಮೂಲಕ ಬಿಜೆಪಿ ಜೆಡಿಎಸ್ ನಾಯಕರಿಗೆ ಎಚ್ಚರಿಕೆ ನೀಡಬೇಕಿದೆ.
ಬೆಳಿಗ್ಗೆ 11 ಗಂಟೆಗೆ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಸಂವಿಧಾನ ಶಿಲ್ಪಿಗೆ ಮಾಲಾರ್ಪಣೆ ಮಾಡಿ ನಂತರ
ಪಿ. ಬಿ. ರಸ್ತೆಯ ಮೂಲಕ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ವೃತ್ತದಲ್ಲಿ ಬಹಿರಂಗ ಸಭೆಯಲ್ಲಿ ಆಯೋಜಿಸಲಾಗಿದೆ.
ಆಗಾಗಿ ಎಲ್ಲಾ ಅಹಿಂದ ವರ್ಗಗಳ ನಾಯಕರು, ಹಿಂದುಳಿದ ವರ್ಗಗಳ ಮುಖಂಡರು, ಎಲ್ಲಾ ವರ್ಗದ ನಾಯಕರು, ಯುವ ಮಿತ್ರರು ಹಾಗೂ ಸಿದ್ಧರಾಮಯ್ಯನವರ ಅಭಿಮಾನಿಗಳು ಮತ್ತು ಜಿಲ್ಲೆಯ ಎಲ್ಲಾ ಶೋಷಿತ ಸಮಾಜದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರತಿಭಟನೆಯನ್ನು ಯಶಸ್ವಿ ಗೊಳಿಸಬೇಕೆಂದು ಮನವಿ ಮಾಡಿದ್ದಾರೆ.
ದಿನಾಂಕ : 05.08.2024 ಸೋಮವಾರ
ಸಮಯ : ಬೆಳಿಗ್ಗೆ 10:30 ಗಂಟೆಗೆ
ಸ್ಥಳ : ಡಾಕ್ಟರ್ ಬಿ ಆರ್ ಅಂಬೇಡ್ಕರ್ ವೃತ್ತ ಹದಡಿ ರಸ್ತೆ ದಾವಣಗೆರೆ